
ಪದವಿ ಪೂರ್ವ ಶಿಕ್ಷಣ ಇಲಾಖೆ ರಾಯಚೂರು, ಸಿದ್ದಾರ್ಥ ಪದವಿ ಪೂರ್ವ ಕಾಲೇಜು ಮಾನ್ವಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಿನ್ನೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಲೋಯಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುಂಪು ಆಟಗಳಾದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ
ತ್ರೋಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ
ವೈಯಕ್ತಿಕ ಆಟಗಳಾದ ಅಥ್ಲೆಟಿಕ್ಸ್ 4×100 ರಿಲೇ ಪಂದ್ಯಾವಳಿಯಲ್ಲಿ ಕುಮಾರಿ ಸೃಷ್ಟಿ ಮತ್ತು ತಂಡದವರು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿ ಲೊಯೊಲ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ